ಕಾರಟಗಿ ತಾಲೂಕಿನ ಸಿದ್ದಾಪುರದಲ್ಲಿ ಪೋಲಿಯೋ ಅಭಿಯಾನದಲ್ಲಿ ಸಿಡಿಪಿಒ ವಿರುಪಾಕ್ಷಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರುಕಾರಟಗಿ: ಪೋಲಿಯೋ ಮುಕ್ತ ದೇಶ ನಿರ್ಮಿಸಲು ಹಾಗೂ ಮಕ್ಕಳನ್ನು ಅಂಗವಿಕಲತೆಯಿಂದ ಸುರಕ್ಷಿತವಾಗಿಡಲು ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಎಂದು ಕನಕಗಿರಿ ಶಿಶು ಅಭಿವೃದ್ಧಿ ಅಧಿಕಾರಿ ವಿರುಪಾಕ್ಷಿ ಅವರು ಹೇಳಿದರು.ತಾಲೂಕಿನ ಸಿದ್ದಾಪುರ ಗ್ರಾಮದ 1ನೇ ವಾರ್ಡ್ ನ ಸರ್ಕಾರಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪುಟಾಣಿಗಳಿಗೆ ಪೋಲಿಯೋ ಲಸಿಕೆ ಹಾಕಿದ ಬಳಿಕ ಮಾತನಾಡಿದರು.
ಕೆಲ ದೇಶಗಳಲ್ಲಿ ಪ್ರಸ್ತುತದಲ್ಲಿ ಸಹ ಪೋಲಿಯೋ ಅಲ್ಲಿನ ಜನರನ್ನು ಬಾಧಿಸುತ್ತಿದೆ. ಇಂದಿಗೂ ಅವರು ಪೋಲೀಯೋದಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ, ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತ ಪೋಲಿಯೋ ತಡೆಗಟ್ಟುವಲ್ಲಿ ಯಶಸ್ಸು ಕಂಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಈ ಲಸಿಕೆ ಮಕ್ಕಳಿಗೆ ನೀಡಲಾಗುತ್ತಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಮಕ್ಕಳನ್ನು ಅಂಗವಿಕತೆಯಿಂದ ಈ ಲಸಿಕೆ ಕಾಪಾಡುತ್ತದೆ. ಒಂದು ವೇಳೆ ಈಗ ಮಕ್ಕಳಿಗೆ ಲಸಿಕೆ ಹಾಕಿಸಲು ಆಗದಿದ್ದರೆ, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡುತ್ತಾರೆ. ಆಗ ತಪ್ಪದೆ ಮಕ್ಕಳಿಗೆ ಲಸಿಕೆ ಹಾಕಿಸಿ, ಅವರ ಆರೋಗ್ಯದ ಬಗ್ಗೆ ಗಮನ ಹರಿಸಿ ಎಂದರು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.