ಕೊಪ್ಪಳದಲ್ಲಿ ಅಕ್ರಮ ಮರಳು ದಂಧೆಕೋರರಿಗೆ ಪೊಲೀಸರ ಶಾಕ್!

ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಜಿಲ್ಲೆಯ ಕನಕಗಿರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿದ್ದಾರೆ. ರಾತ್ರೋರಾತ್ರಿ ಪೊಲೀಸರ ಸಡನ್ ಎಂಟ್ರಿ: ಕನಕಗಿರಿ ತಾಲೂಕಿನ ನವಲಿ ಗ್ರಾಮದಲ್ಲಿ ತಡರಾತ್ರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ರೈತರ ಜಮೀನುಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ದಂಧೆಗೆ ಬಳಸುತ್ತಿದ್ದ 8 ಇಟಾಚಿ (Hitachi) ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ನವಲಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಅಡ್ಡೆಗಳ ಮೇಲೆ ದಾಳಿ:
ನವಲಿ ಗ್ರಾಮವೊಂದರಲ್ಲೇ ಸುಮಾರು 10ಕ್ಕೂ ಹೆಚ್ಚು ಅಕ್ರಮ ಮರಳು ದಂಧೆ ಕೇಂದ್ರಗಳ ಮೇಲೆ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭೂಮಿಯನ್ನು ಅಗೆಯುತ್ತಿದ್ದ ಇಟಾಚಿಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ, ಪೊಲೀಸರ ಆಗಮನದ ಸುಳಿವು ಅರಿತ ದಂಧೆಕೋರರು ಯಂತ್ರಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಪ್ರಕರಣ ದಾಖಲು:
ಕೃಷಿ ಭೂಮಿಯನ್ನು ಹಾಳುಗೆಡವಿ ಅಕ್ರಮವಾಗಿ ಮರಳು ಲೂಟಿ ಮಾಡುತ್ತಿದ್ದ ಜಾಲಕ್ಕೆ ಈ ದಾಳಿಯಿಂದ ಭಾರಿ ಹೊಡೆತ ಬಿದ್ದಿದೆ. ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲು ತಯಾರಿ ನಡೆಯುತ್ತಿದೆ, ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
Discover more from somekranti.com
Subscribe to get the latest posts sent to your email.