ಗ್ರಾಮದೇವತೆ ಶ್ರೀ ದುಗಲಮ್ಮ ದೇವಿ
ಕಾರಟಗಿ: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ದುಗಲಮ್ಮ ದೇವಿ ಜಾತ್ರಾ ಮಹೋತ್ಸವ ಆಚರಣೆ ಸಂಬಂಧ ದುಗಲಮ್ಮ ದೇವಿ ಮಂದಿರದ ಆವರಣದಲ್ಲಿ ಮಂಗಳವಾರ ಕರೆಯಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ.
ಸಭೆಯಲ್ಲಿ ವಿವಿಧ ಗ್ರಾಮಗಳ ಮುಖಂಡರು ಹಾಗೂ ಸಿದ್ದಾಪುರ ಗ್ರಾಮಸ್ಥರು ಪಾಲ್ಗೊಂಡಿದ್ದರು. ಆದರೆ, ಗ್ರಾಮ ದೇವತೆ ಜಾತ್ರೆ ತರಾತುರಿಯಲ್ಲಿ ಮಾಡಲು ಸಾಧ್ಯವಿಲ್ಲ. ಸರ್ವರ ಅಭಿಪ್ರಾಯ ಮುಖ್ಯವಾಗುತ್ತದೆ. ಹೀಗಾಗಿ ಈಗಲೇ ನಿರ್ಧಾರ ಕೈಗೊಳ್ಳುವುದು ಬೇಡ. ಮತ್ತೊಂದು ದಿನಾಂಕ ನಿಗಧಿಗೊಳಿಸಿ ಸಭೆ ಕರೆಯಲಾಗುವುದು. ಆ ಸಭೆಯಲ್ಲಿ ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಳ್ಳುವುದಾಗಿ ತೀರ್ಮಾನಿಸಲಾಯಿತು.
——